ತೆಂಗಿನ ಸಸಿ ಬೆಳವಣಿಗೆಗೆ ಇದು ದೊಡ್ದ ತಡೆ.
ಮುಸ್ಸಂಜೆ ಮತ್ತು ಕತ್ತಲೆಗೆ ದೀಪದ ಬೆಳಕಿಗೆ ಬಂದು ಬಿಳುವ ದುಂಬಿಗಳಲ್ಲಿ ಕುರುವಾಯಿ ಕೀಟ ಒಂದು.ಈ ದುಂಬಿ ತೆಂಗಿನ ಬೆಳೆಗಾರರ ಅತೀ ದೊಡ್ದ ಶತ್ರು. ನಮ್ಮ ಹಿರಿಯರು ಹೇಳುವುದಿದೆ, ಒಂದು ಕುರುವಾಯಿ ಕೊಂದರೆ 1 ದೇವಾಸ್ಥಾನ ಕಟ್ಟಿದ ಪುಣ್ಯವಿದೆ ಎಂದು. ಯಾಕೆಂದರೆ ಕುರುವಾಯಿ ಅಷ್ಟು ಹಾನಿ ಮಾಡುತ್ತದೆ.. ಆದ ಕಾರಣ ವೃಕ್ಷಕ್ಕೆ ತೊಂದರೆ ಕೊಡುವ ಕೀಟ ಎಂಬ ಭಾವನೆಯಿಂದಲಾದರೂ ಅದು ನಶಿಸಲಿ ಎಂದು ಹಾಗೆ ಹೇಳಿರಬೇಕು. ಬಾಧೆಯ ಲಕ್ಷಣ: ತೆಂಗಿನ ಸಸಿಯ/ಮರದ ಮೂಡುತ್ತಿರುವ ಇನ್ನೂ ಅರಳಿರದ ಸುಳಿಯ…
