ಅಡಿಕೆಗೆ ದರ ಏರಿದೆ- ಇನ್ನೂ ಏರುತ್ತದೆ ಎಂಬ ಸುದ್ದಿ !
ಸಾಮಾನ್ಯವಾಗಿ ಮಳೆಗಾಲ ಪ್ರಾರಂಭದ ಒಂದೆರಡು ತಿಂಗಳು ಮಾರುಕಟ್ಟೆ ಸ್ವಲ್ಪ ಮಬ್ಬಾಗಿರುತ್ತದೆ. ಕೃಷಿಕರು ಅವರ ಹೊಲದ ಕೆಲಸದಲ್ಲಿ ಹೆಚ್ಚಾಗಿ ತೊಡಗಿಸಿಕೊಂಡಿರುತ್ತಾರೆ. ಜೊತೆಗೆ ಹವಾಮಾನವೂ ವ್ಯವಹಾರಕ್ಕೆ ಸ್ವಲ್ಪ ಅನುಕೂಲಕರವಾಗಿ ಇರುವುದಿಲ್ಲ. ಹಾಗಾಗಿ ಬಹುತೇಕ ಕೃಷಿ ಉತ್ಪನ್ನಗಳ ಬೆಲೆ ಸ್ವಲ್ಪ ಇಳಿಕೆಯೇ ಆಗುವುದು. ಮಳೆಗಾಲ ಒಮ್ಮೆ ಸೆಟ್ ಆದ ಮೇಲೆ ಮತ್ತೆ ವ್ಯವಹಾರ ಚುರುಕಾಗುತ್ತದೆ. ಇದು ಹಿಂದಿನಿಂದಲೂ ನಡೆದುಕೊಂಡು ಬಂದಂತದ್ದು. ಈಗ ಮತ್ತೆ ಮಾರುಕಟ್ಟೆ ಚೇತರಿಕೆಯನ್ನು ಕಾಣುತ್ತಿದೆ. ಅಡಿಕೆ ದರ ಏರಿದೆ. ಇನ್ನೂ ಸ್ವಲ್ಪ ಸ್ವಲ್ಪವೇ ಏರಿಕೆ ಆಗಬಹುದು ಎನ್ನುವ ಸುದ್ದಿ…
